ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Views: 0
ರಾಜ್ಯ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ವ್ಯಾಪ್ತಿಯಲ್ಲಿ ಬಿರುಗಾಳಿ ವೇಗವು ಗಂಟೆಗೆ 45 ಕಿ. ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಜೂನ್ 27 ರವರೆಗೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಜಾಗೃತೆ ಕ್ರಮವಾಗಿ ಅಲರ್ಟ್ ಘೋಷಣೆಯಾಗಿದೆ.
ಚಿಕ್ಕಮಗಳೂರು, ಕೊಡಗು, ಮಡಿಕೇರಿ ಪ್ರದೇಶದಲ್ಲೂ ಭಾರಿ ಮಳೆ ಆಗಲಿದೆ ಎಂದು ತಿಳಿಸಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 25 ರವರೆಗೆ ‘ಆರೆಂಜ್ ಅಲರ್ಟ್ ‘ಘೋಷಣೆ ಮಾಡಲಾಗಿದ್ದು, ಈ ವೇಳೆ 115.6 ಮಿ. ಮೀಟರ್ ನಿಂದ 204.4 ಮಿ. ಮೀಟರ್ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ನಂತರ 29 ರವರೆಗೆ ‘ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಕುಂದಾಪುರ, ಕಾರ್ಕಳ ತಾಲೂಕಿನಾದ್ಯಂತ ಶನಿವಾರ ದಿನವಿಡೀ ಉತ್ತಮ ಮಳೆಯಾಗಿದ್ದು, ಗ್ರಾಮೀಣ ಪ್ರದೇಶ ಹಾಗೂ ಹೆದ್ದಾರಿಗಳಲ್ಲಿ ಒಳ ಚರಂಡಿ ವ್ಯವಸ್ಥೆ ಗಳಿಲ್ಲದೆ ರಸ್ತೆಯಲ್ಲಿ ನೀರು ತುಂಬಿದೆ. ತಗ್ಗು ಪ್ರದೇಶದಲ್ಲಿ ನೀರು ಹರಿದು ಕೃತಕ ನರೆ ಉಂಟಾಗಿದೆ.