ಜನಮನ

ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಆರ್ಭಟ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Views: 156

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲಿನ ಬಹುತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.

ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮತ್ತು ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.

ಗಾಳಿಯ ವೇಗ ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ವರೆಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಹೇಳಿದೆ.

Related Articles

Back to top button