ಜನಮನ

ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ದುರಂತ; 7 ಮಂದಿ ಸಜೀವ ದಹನ 

Views: 12

ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ದುರಂತ; 7 ಮಂದಿ ಸಜೀವ ದಹನಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಕಟ್ಟಡದಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ.

ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲಮಹಡಿಯಲ್ಲಿನ ಅಂಗಡಿಗಳು, ಸ್ಕ್ರ್ಯಾಪ್ ಸಾಮಗ್ರಿಗಳು ಮತ್ತು ಸುತ್ತಮುತ್ತಲಿನ ಹಲವಾರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು ನಡೆಯುತ್ತಿವೆ.

ಇಬ್ಬರು ಅಪ್ರಾಪ್ತರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು. ಚಿಕಿತ್ಸೆ ವೇಳೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಇಬ್ಬರ ಸ್ಥಿತಿ ಗಂಭೀರವಾಗಿದೆ – 25 ಜನರನ್ನು ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ವೈದ್ಯಕೀಯ ಕಾಲೇಜು (ಎಚ್‌ಬಿಟಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಂಬೈ ಅಗ್ನಿಶಾಮಕದಳ ಎಂಟು ಅಗ್ನಿಶಾಮಕ ಇಂಜಿನ್‌ಗಳು, ಐದು ಜಂಬೋ ಟ್ಯಾಂಕರ್‌ಗಳು, ನೀರಿನ ಟ್ಯಾಂಕ್, ಟರ್ನ್‌ಟೇಬಲ್ ಲ್ಯಾಡರ್ ಸ್ಥಳಕ್ಕೆ ಆಗಮಿಸಿತ್ತು.

 

 

 

 

 

Related Articles

Back to top button