ಜನಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಸಂವಾದ: ಮಳೆ ಹಾನಿ, ಕೊರತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ

Views: 0
ರಾಜ್ಯದಲ್ಲಿ ಕೆಲವೆಡೆ ವಿಪರೀತ ಮಳೆಯಾಗುತ್ತಿದ್ದು, ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮಳೆ ಹಾನಿ, ಮಳೆ ಕೊರತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆ ಆಗುವ ಸಾಧ್ಯತೆಯಿದ್ದು, ಮಳೆ ಕೊರತೆ ಇರುವ ತಾಲೂಕುಗಳ ಸಂಖ್ಯೆ ಇಳಿಕೆಯಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಲ್ಲಿಯವರೆಗೆ ಮಳೆಯ ಅಬ್ಬರದಿಂದ ಒಟ್ಟು 38 ಮಾನವ ಜೀವ ಹಾನಿಯಾಗಿದೆ. 38 ಜನರು ಗಾಯಗೊಂಡಿದ್ದಾರೆ. 105 ಜಾನುವಾರಗಳು ಮೃತಪಟ್ಟಿದೆ. 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2,682 ಮನೆಗಳು ಭಾಗಶಃ ಹಾನಿಯಾಗಿದೆ ಎಂದರು.






