ಇತರೆ

ಮೂಕ-ಕಿವುಡ ಬಾಲಕಿಯನ್ನು ಅಪಹರಿಸಿ ಭೀಕರ ಕೊಲೆ

Views: 62

ಕನ್ನಡ ಕರಾವಳಿ ಸುದ್ದಿ: ಮೂಕ-ಕಿವುಡ ಬಾಲಕಿಯನ್ನು ಅಪಹರಿಸಿ ಭೀಕರವಾಗಿ ಕೊಲೆ ಮಾಡಿದೆ.

ಪರಾರಿಯಾಗಿರುವ ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕಳೆದ ಭಾನುವಾರ 14 ವರ್ಷದ ಈ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಕತ್ತು ಹಿಸುಕಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಿ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ನಿನ್ನೆ ಬಾಲಕಿಯ ಮೃತದೇಹ ನೋಡಿದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುವುದು ಗೊತ್ತಾಗಲಿದೆ.ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

Related Articles

Back to top button