ಮೂವರ ಘೋರ ಸಾವಿಗೆ ಮಿಡಿದ ಯಶ್.. ದುರಂತ ನಡೆದ ಗ್ರಾಮಕ್ಕೆ ಭೇಟಿ..ಮೃತ ಕುಟುಂಬಕ್ಕೆ ಸಾಂತ್ವನ, ನೊಂದವರ ದುಃಖದಲ್ಲಿ ಭಾಗಿ

Views: 101
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ರಾಕಿಂಗ್ ಸ್ಟಾರ್ ಯಶ್ಗೆ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬರಸಿಡಿಲಿನಂತೆ ಬಂದೆರಗಿತ್ತು. ನೆಚ್ಚಿನ ನಾಯಕನ ಹುಟ್ಟಹಬ್ಬದ ನಿಮಿತ್ತ ಕಟೌಟ್ ನಿರ್ಮಿಸಲು ಮುಂದಾಗಿದ್ದ ಗದಗ ಜಿಲ್ಲೆಯ ಮೂವರು ಅಭಿಮಾನಿಗಳು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದರು.
ಸುದ್ದಿ ತಿಳಿಯುತ್ತಿದ್ದಂತೆಯೇ ಕಹಿ ಘಟನೆಗೆ ಮರುಗಿರುವ ಯಶ್, ಹುಟ್ಟುಹಬ್ಬ ನಿಮಿತ್ತ ಹಮ್ಮಿಕೊಂಡಿದ್ದ ಎಲ್ಲಾ ಕೆಲಸ ಕಾರ್ಯಗಳನ್ನೂ ಕ್ಯಾನ್ಸಲ್ ಮಾಡಿದ್ದಾರೆ. ಜೊತೆಗೆ ಮೃತಪಟ್ಟಿರುವ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಸಂಜೆ ವೇಳೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಯಶ್ ಹೋಗಲಿದ್ದಾರೆ. ಅಲ್ಲಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿ, ನೊಂದವರ ದುಃಖದಲ್ಲಿ ಭಾಗಿ ಆಗಲಿದ್ದಾರೆ
ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬ್ಯಾಂಕಾಗ್ಗೆ ಹೋಗಿದ್ದಾರೆ ಎನ್ನಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ, ಯಶ್ ವಿದೇಶದಿಂದ ಬಂದಿದ್ದು, ಸದ್ಯ ಗೋವಾದಲ್ಲಿದ್ದಾರಂತೆ. ಗೋವಾದಿಂದ ಚಾರ್ಟೆಟ್ ವಿಮಾನದ ಮೂಲಕ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಬರಲಿದ್ದಾರೆ. ಅಲ್ಲಿಂದ ನೇರವಾಗಿ ಗದಗಕ್ಕೆ ಹೋಗಲಿದ್ದಾರೆ. ಸಂಜೆ 4 ಗಂಟೆ ವೇಳೆಗೆ ಯಶ್, ದುರಂತ ನಡೆದ ಗ್ರಾಮವನ್ನು ತಲುಪಲಿದ್ದಾರೆ ಎನ್ನಲಾಗಿದೆ.
ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಟೌಟ್ ನಿಲ್ಲಿಸುತ್ತಿದ್ದಾಗ ಮೂವರು ಯುವಕರಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರೋ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಯುವಕರು. ಮೃತ ಯುವಕರು ಸೂರಣಗಿ ಗ್ರಾಮದ ನಿವಾಸಿಗಳು. ಯಶ್ ಬರ್ತ್ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಕಟೌಟ್ ಕಟ್ಟಲು ಮುಂದಾಗಿದ್ದರು. ಕಟೌಟ್ ಮೇಲೆ ಎತ್ತುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಯುವಕರಿಗೆ ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ