ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅರ್ಜಿ ಕೊನೆ ದಿನ ಯಾವಾಗ? ಮಾಹಿತಿ ಇಲ್ಲಿದೆ..

Views: 30
ಕರ್ನಾಟಕ ರಾಜ್ಯದಲ್ಲಿ ವಿವಿಧ 11 ಇಲಾಖೆಗಳು ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತವೆ. ಅವುಗಳ ಪೈಕಿ ಪ್ರಸ್ತುತ ಯಾವೆಲ್ಲ ವಿದ್ಯಾರ್ಥಿವೇತನಕ್ಕೆ ಅರ್ಜಿ ಸ್ವೀಕಾರ ಮಾಡಲಾಗುತ್ತಿದೆ, ಯಾವ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ ಯಾವಾಗ ಎಂಬ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.
ವಿದ್ಯಾರ್ಥಿವೇತನ ನೀಡುವ ಇಲಾಖೆ ಮತ್ತು ಅರ್ಜಿಗೆ ಕೊನೆ ದಿನಾಂಕ ಮಾಹಿತಿ
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:14-02-2024
ಆರ್ಯ ವೈಶ್ಯ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:15-02-2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:15-02-2024
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:15-02-2024
ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:29-02-2024
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :31-03-2024
ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:31-05-2024
ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್, ಶುಲ್ಕ ಮರುಪಾವತಿ ಅರ್ಜಿಗೆ ದಿನಾಂಕ ವಿಸ್ತರಣೆ
ಈ ಮೇಲಿನ ಯಾವುದೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮೊದಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಖಾತೆ ಸೃಜಿಸಬೇಕು. ಅಂದರೆ ಬೇಸಿಕ್ ಮಾಹಿತಿಗಳನ್ನು ನೀಡಿ ಖಾತೆ ತೆರೆಯಬೇಕು. ನಂತರ ಅರ್ಜಿ ಸಲ್ಲಿಸಬೇಕು.
SSP ಪೋರ್ಟಲ್‌ನಲ್ಲಿ ಖಾತೆ ಸೃಜಿಸಲು ಲಿಂಕ್‌ಗಾಗಿ ಕ್ಲಿಕ್ ಮಾಡಿ
ಸ್ಕಾಲರ್‌ಶಿಪ್‌ಗೆ ಅರ್ಜಿ ಹಾಕಲು ಕ್ಲಿಕ್ ಮಾಡಿ
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಯಾರೆಲ್ಲ ಅರ್ಹರು?
ಐಟಿಐ, ಡಿಪ್ಲೊಮ, ದ್ವಿತೀಯ ಪಿಯುಸಿ, ಪದವಿ (ತಾಂತ್ರಿಕ ಹಾಗೂ ತಾಂತ್ರಿಕೇತರ), ಸ್ನಾತಕೋತ್ತರ ಪದವಿ (ತಾಂತ್ರಿಕ, ತಾಂತ್ರಿಕೇತರ), ವೃತ್ತಿಪರ ಕೋರ್ಸ್‌ಗಳನ್ನು ಓದಲು ಪ್ರವೇಶ ಪಡೆದಿರುವವರು.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಬೇಕಾದ ದಾಖಲೆಗಳು
– ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
– ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
– ವಿದ್ಯಾರ್ಥಿ ಮೊಬೈಲ್ ಸಂಖ್ಯೆ
– ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಇಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ.
– ಇ-ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು
– ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ.
– ಇತರೆ ಅಗತ್ಯ ಮಾಹಿತಿಗಳು