ಇತರೆ

ಮೆಟ್ರೋ ರೈಲು ಬರುವ ವೇಳೆ ಹಳಿ ಮೇಲೆ ಹಾರಿ  ಕಾನೂನು ವಿದ್ಯಾರ್ಥಿ ಆತ್ಮಹತ್ಯೆ 

Views: 52

ಬೆಂಗಳೂರು: ನಮ್ಮ ಮೆಟ್ರೋ ಸ್ಟೇಷನ್​ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅತ್ತಿಗುಪ್ಪೆಯಲ್ಲಿ ನಡೆದಿದೆ. ಧ್ರುವ್ ಟಕ್ಕರ್ (19) ಮೃತ ಯುವಕ. .

ಮೃತ ಯುವಕ ಮೊದಲ ವರ್ಷದ ಕಾನೂನು ವಿದ್ಯಾರ್ಥಿಯಾಗಿದ್ದ ಅವರು ನ್ಯಾಷನಲ್ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹೀಗೆ ಫೋನ್​ನಲ್ಲಿ ಮಾತನಾಡುತ್ತಾ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್​ಗೆ ಬಂದಿದ್ದಾನೆ. ಈ ವೇಳೆ ವಿದ್ಯಾರ್ಥಿ ಜೊತೆಗೆ ಓರ್ವ ಯುವತಿ ಹಾಗೂ ಮತ್ತೊರ್ವ ಇದ್ದರು. ಫೋನ್​ನಲ್ಲಿ ಮಾತನಾಡುತ್ತಾ ಅಲ್ಲಿಂದ ನೇರವಾಗಿ ರೈಲು ಬರುವ ಸಮಯದಲ್ಲಿ ಟ್ರ್ಯಾಕ್​ ಮೇಲೆ ಹಾರಿದ್ದಾನೆ. ಕೂಡಲೇ ಜೊತೆಗಿದ್ದವರು ಆತನನ್ನು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಇನ್ನು ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿಯ ತಲೆ ಹಾಗೂ ದೇಹ ಬೇರೆಯಾಗಿದೆ. ಸದ್ಯ ಸ್ಥಳಕ್ಕೆ ವೆಸ್ಟ್ ಡಿಸಿಪಿ ಗಿರೀಶ್ ಭೇಟಿ ನೀಡಿ ಮೆಟ್ರೋ ಹಳಿಯ ಮೇಲೆ ಬಿದ್ದ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಕೂಡಲೇ ಪೊಲೀಸರು ಕಾಲೇಜಿಗೆ ಕರೆ ಮಾಡಿ ಪೋಷಕರ ಮಾಹಿತಿ ಕಲೆ ಹಾಕುತ್ತಿದ್ದಾರೆ.  ಮೃತಪಟ್ಟ ವಿದ್ಯಾರ್ಥಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Related Articles

Back to top button