ಶಿಕ್ಷಣ

ಮೇ ಎರಡನೇ ವಾರ SSLC ಫಲಿತಾಂಶ

Views: 46

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4, ರವರೆಗೆ ನಡೆದು ಮುಕ್ತಾಯಗೊಂಡಿದೆ.

ಇದೀಗ ಏಪ್ರಿಲ್ 15 ರಿಂದ ರಾಜ್ಯಾದ್ಯಂತ 280 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ.ಎಲ್ಲಾ ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

ಮೇ ಎರಡನೇ ವಾರದಲ್ಲಿ ಫಲಿತಾಂಶಗಳು ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆ -1ಕ್ಕೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 15881 ಶಾಲೆಗಳ ಈ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ 2ನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ/ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬೇಕು.

ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ.

Related Articles

Back to top button