ಮೈತ್ರಿ ಮುರಿದು ಬಿದ್ದರೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ನಿಂದ ಪ್ಲಾನ್ ‘ಬಿ’ ರೆಡಿ..!

Views: 61
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಮುರಿದು ಬಿದ್ದರೆ ಜೆಡಿಎಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡುವ ಸಾಧ್ಯತೆ ಇದೆ. ಮೈತ್ರಿ ಮುರಿದು ಬಿದ್ದರೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ನಿಂದ ಪ್ಲಾನ್ ‘ಬಿ’ ಕೂಡ ರೆಡಿಯಾಗಿದೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗಾಗಿ ಜೆಡಿಎಸ್ ತನ್ನ ಕ್ಷೇತ್ರಗಳನ್ನು ತ್ಯಾಗ ಮಾಡಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿದರೆ ಬಿಜೆಪಿ ವಿರುದ್ಧ JDS ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಪ್ರಮುಖವಾಗಿ ಕೋಲಾರದ ಟಿಕೆಟ್ ಸಿಗದಿದ್ರೆ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲು ಚಿಂತನೆ ನಡೆಸಲಾಗಿದೆ.
ದಳಪತಿಗಳ ಲೆಕ್ಕಾಚಾರದ ಪ್ರಕಾರ ಜೆಡಿಎಸ್ ಬೆಂಬಲ ಇಲ್ಲದೆ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದು ಕಷ್ಟ. ಹೀಗಾಗಿ ಮೈತ್ರಿ ಮುರಿದು ಬಿದ್ದರೆ ಮೈಸೂರು, ಚಾಮರಾಜನಗರ, ತುಮಕೂರಲ್ಲಿ JDS ಸ್ಪರ್ಧಿಸುವ ಸಾಧ್ಯತೆ ಇದೆ.
ತುಮಕೂರಿನಲ್ಲಿ ಜೆಡಿಎಸ್ ಬೆಂಬಲವಿಲ್ಲದೆ ಬಿಜೆಪಿ ಗೆಲ್ಲೋದು ಕಷ್ಟ. ಮೈಸೂರು ಭಾಗದಲ್ಲಿ ಜೆಡಿಎಸ್ ಇಲ್ಲದೆ, ಬಿಜೆಪಿ ಗೆಲುವು ಸುಲಭವಲ್ಲ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಗೆಲುವು ಕಷ್ಟವಾಗಲಿದೆ. ಶಿವಮೊಗ್ಗ, ಕಲಬುರಗಿ, ರಾಯಚೂರಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಪ್ರಬಲವಾಗಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಖತಂ ಆದ್ರೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿಗೆ ಸೆಡ್ಡು ಹೊಡೆಯುವ ಸಾಧ್ಯತೆ ಇದೆ.