ಮೈಸೂರು:ಕತ್ತು ಹಿಸುಕಿ ಕೊಲೆಯಾದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

Views: 97
ಕನ್ನಡ ಕರಾವಳಿ ಸುದ್ದಿ: ಮೈಸೂರು ನಗರದ ಹೊರವಲಯದ ವಿದ್ಯಾವಿಕಾಸ ಕಾಲೇಜಿನ ಬಳಿ ಕತ್ತು ಹಿಸುಕಿ ಕೊಲೆ ಮಾಡಿದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ.
ಗಿರಿಯಾಬೋವಿಪಾಳ್ಯದ 25 ವರ್ಷದ ಕೊಲೆಯಾದ ರೀತಿಯಲ್ಲಿ ಪತ್ತೆಯಾದ ಯುವತಿ.
ಬುಧವಾರ ಬೆಳಗ್ಗೆ ಕಾಲೇಜಿನ ಬಳಿ ಶವ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಆಲನಹಳ್ಳಿ ಪೊಲಿಸರು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಮೊಬೈಲ್ ಕೂಡ ಪತ್ತೆಯಾಗಿದೆ. ಯುವತಿಯನ್ನು ಯಾರೋ ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ಶವವನ್ನು ಇಲ್ಲಿ ತಂದು ಹಾಕಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ನಾಲ್ಕಾರು ಬಾರಿ ಕರೆ ಮಾಡಿದರೂ ಆಕೆ ಕರೆ ಸ್ವೀಕರಿಸಿಲ್ಲ. ಬುಧವಾರ ಬೆಳಿಗ್ಗೆ 7 ಗಂಟೆ ವೇಳೆಗೆ ತಂದೆಯೇ ಮಗಳ ಮೊಬೈಲ್‌ಗೆ ಮತ್ತೆ ಕರೆ ಮಾಡಿದಾಗ ಆಲನಹಳ್ಳಿ ಪೊಲೀಸರು ಆ ಕರೆ ಸ್ವೀಕರಿಸಿ ನಡೆದ ವಿಚಾರ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬರಲು ಹೇಳಿದ್ದಾರೆ. ಸ್ಥಳ ಮಹಜರು ನಡೆಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೆಆರ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.






