ಇತರೆ

ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ ಮಾಡಿದ 6 ಆರೋಪಿಗಳ ಬಂಧನ.

Views: 0

ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಈ ಹಿಂದೆ ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.

ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.

ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.

ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.

Related Articles

Back to top button