ಯಡ್ತಾಡಿ: ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕರಿಮಣಿ ಸರ ಕಸಿದು ಪರಾರಿ: ಆರೋಪಿ ಸೆರೆ

Views: 3052
ಕನ್ನಡ ಕರಾವಳಿ ಸುದ್ದಿ: ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದು ಪರಾರಿಯಾದ ಘಟನೆ ಯಡ್ತಾಡಿಯಲ್ಲಿ ನಡೆದಿದೆ.
ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟಿ ನಿವಾಸಿ ಮಂಜುನಾಥ ಮಯ್ಯನನ್ನು ಬಂಧಿಸಿದ್ದಾರೆ.
ಗುರುವಾರ ಯಡ್ತಾಡಿ ನಿವಾಸಿ ಸೀತಾ ಬಾಯಿ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯಡ್ತಾಡಿ ಕಡೆಯಿಂದ ಬೈಕ್‌ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಕೂಡಲೇ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪರಿಶೀಲಿಸಿದಾಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈತ ವೃತ್ತಿಯಲ್ಲಿ ಪರೋಟ ವ್ಯಾಪಾರ ನಡೆಸುತ್ತಿದ್ದ ಭಾರೀ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.ಈ ಹಿಂದೆ ಬಾರ್ಕೂರು ಚೌಳಿಕೆರೆ ಸಮೀಪ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ಅಪಹರಿಸಿದ್ದು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.