ರಾಜಕೀಯ
ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗದಿಂದ ನೋಟಿಸ್

Views: 108
ಮೈಸೂರು: 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಏನಿದು ವಿವಾದ..?
ಇತ್ತೀಚೆಗೆ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯತೀಂದ್ರ ಅವರು, ಗುಜರಾತ್ ಹತ್ಯಾಕಾಂಡಕ್ಕೆ ಕಾರಣ ಯಾರು? ಅಂದು ನರಮೇಧ ಮಾಡಿದವರು ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ. ಅವರ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಿ ಮೋದಿ ತಮ್ಮ ಪಕ್ಕದಲ್ಲೇ ಕೂರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.