ರಾಜಕೀಯ
ಯತ್ನಾಳ್ ಭಾಷಣ ಮಾಡುತ್ತಿದ್ದ ವೇದಿಕೆಗೆ ಮಚ್ಚು ಹಿಡಿದು ಬಂದ ವ್ಯಕ್ತಿ!

Views: 90
ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಚ್ಚು ಹಿಡಿದು ವೇದಿಕೆ ಏರಿದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀರಾಮನವಮಿ ಪ್ರಯುಕ್ತ ಹಿಂದು ಜಾಗರಣ ವೇದಿಕೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯತ್ನಾಳ್ ಅವರು ಭಾಷಣ ಮಾಡುತ್ತಿದ್ದರು. ಆಗ ಮಚ್ಚು ಇಟ್ಟುಕೊಂಡಿದ್ದ ವ್ಯಕ್ತಿ ವೇದಿಕೆ ಏರಿ ಆತಂಕ ಸೃಷ್ಟಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಈತನ ಹೆಸರು ಶ್ರೀನಿವಾಸ್ ಪೂಜಾರಿ ಎನ್ನಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾರಕಾಸ್ತ್ರ ಹಿಡಿದು ವೇದಿಕೆ ಹತ್ತಿದ ಎಂಬುದು ಗೊತ್ತಾಗಲಿಲ್ಲ.