ಯುವಜನ
ಯುವಕರ ಹುಚ್ಚಾಟ:ಪಟಾಕಿ ಸಿಡಿಸಿ ಸ್ನೇಹಿತನನ್ನು ಬಲಿಕೊಟ್ಟ ಗೆಳೆಯರು!

Views: 459
ಕನ್ನಡ ಕರಾವಳಿ ಸುದ್ದಿ: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.ಬೆಂಗಳೂರು ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತ ಹುಚ್ಚಾಟಕ್ಕೆ ಬಲಿಯಾಗಿದ್ದಾನೆ.
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.






