ಯೋಗವು ಜಗತ್ತನ್ನುಒಂದುಗೂಡಿಸುತ್ತದೆ: ಪ್ರಧಾನಿ

Views: 0
ದೇಶಾದ್ಯಂತ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಜೂನ್ 21ರಂದು ಒಂಭತ್ತನೇ ಯೋಗ ದಿನಾಚರಣೆ ನಡೆಯುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಳಿಗ್ಗೆಯೇ ರಾಷ್ಟ್ರಪತಿ ಭವನದಲ್ಲಿ ಸಿಬ್ಬಂದಿಗಳು ಹಾಗೂ ಇತರರೊಂದಿಗೆ ಯೋಗದಲ್ಲಿ ಪಾಲ್ಗೊಂಡು ಜೊತೆಯಲ್ಲಿ ಉಪರಾಷ್ಟ್ರಪತಿ ಯೋಗದಲ್ಲಿ ಪಾಲ್ಗೊಂಡಿದ್ದರು. ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದ ದೇಶ ಭಾರತ. ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ಮೋದಿಯವರು ವಿಶ್ವಸಂಸ್ಥೆ ಯಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.ಇಂದು ಬೆಳಿಗ್ಗೆ ಯೋಗ ದಿನಾಚರಣೆಯ ಅಂಗವಾಗಿ ಪ್ರಧಾನಿ ಮೋದಿ ಮಾತನಾಡಿ, ಯೋಗವು ಜಾಗತಿಕ ಚೇತನವಾಗಿದೆ ಮತ್ತು ಜಗತ್ತನ್ನು ಒಂದುಗೂಡಿಸುತ್ತದೆ. ಎಂದು ಹೇಳಿದ್ದಾರೆ.
180ಕ್ಕೂ ಹೆಚ್ಚು ದೇಶಗಳು ಪ್ರತಿನಿಧಿಗಳೊಂದಿಗೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಂತರಾಷ್ಟ್ರೀಯ ಒಂಭತ್ತನೇ ಯೋಗ ದಿನಾಚರಣೆಯನ್ನು ಪ್ರಧಾನಿ ಮೋದಿ ಮುನ್ನಡೆಸಲಿರುವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.