ಇತರೆ
ರಸ್ತೆ ಬದಿ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೊಲೆರೋ ಪಲ್ಟಿ : SSLC ವಿದ್ಯಾರ್ಥಿ ಸ್ಥಳದಲ್ಲೇ ಸಾವು

Views: 172
ಕನ್ನಡ ಕರಾವಳಿ ಸುದ್ದಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಹೊನ್ನಪ್ಪ ಮೃತ ವಿದ್ಯಾರ್ಥಿ. ಗಣಮೂರು ಗ್ರಾಮದ ನಿವಾಸಿ. ಚಂದ್ರಬಂಡಾ ಕಡೆಗೆ ಹೋಗಿತ್ತಿದ್ದ ಬೊಲೆರೋ ವಾಹನ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.