ರಾಜಕೀಯ ತಿರುವು ಪಡೆದ ಹನುಮಧ್ವಜ ವಿವಾದ, ಕೇಸರಿ ಶಾಲು ಧರಿಸಿ ಬೀದಿಗಿಳಿದ ‘ಜಾತ್ಯತೀತ ಜನತಾದಳ’ ಮುಖಂಡರು!

Views: 40
ರಾಜಕೀಯ ತಿರುವು ಪಡೆದ ಹನುಮಧ್ವಜ ವಿವಾದ, ಕೇಸರಿ ಶಾಲು ಧರಿಸಿ ಬೀದಿಗಿಳಿದ ‘ಜಾತ್ಯತೀತ ಜನತಾದಳ’ ಮುಖಂಡರು
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಹನುಮಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಸರ್ಕಾರಿ ಜಾಗದಲ್ಲಿ ಸ್ಥಾಪಿಸಿದ್ದ ಧ್ವಜ ಸ್ಥಂಬದಿಂದ ಹನುಮಧ್ವಜ ಇಳಿಸಿ, ತ್ರಿವರ್ಣ ಧ್ವಜ ಹಾರಿಸಿದ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜಾತ್ಯತೀತಿ ಜನತಾದಳ ನಾಯಕರೂ ಕೂಡ ತಮ್ಮ ಪಕ್ಷದ ಹಸಿರು ಶಾಲುಗಳನ್ನು ಬಿಟ್ಟು. ಕೇಸರಿ ಶಾಲುಗಳನ್ನು ಧರಿಸಿ ಬೀದಿಗೆ ಇಳಿದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಇಂದು ಆಯೋಜಿಸಿದ್ದ ಪ್ರತಿಭಟನೆಯನ್ನು ಖುದ್ದು ಹೆಚ್.ಡಿ. ಕುಮಾರಸ್ವಾಮಿಯವರೆ ಕೇಸರಿ ಶಾಲು ಧರಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ, ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾತ್ಯತೀತ ಜನತಾದಳ ಮತ್ತು ಬಿಜೆಪಿ ವತಿಯಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಸಿಟಿ ರವಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಪ್ರೀತಂಗೌಡ, ಸೇರಿ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗಿಯಾದರು.