ಜನಮನ
ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದಿನಿಂದ 5 ದಿನಗಳವರೆಗೆ ಭಾರಿ ಮಳೆ ಮುನ್ಸೂಚನೆ

Views: 129
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇಂದಿನಿಂದ ಮತ್ತೆ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






