ರಾಜ್ಯದಲ್ಲಿ 7,205 ಮಂದಿ ಪರೀಕ್ಷೆಯಲ್ಲಿ 328 ಮಂದಿಗೆ ಕೊರೊನಾ ಪಾಸಿಟಿವ್

Views: 17
ಬೆಂಗಳೂರು: ರಾಜ್ಯದಲ್ಲಿ ಇಂದು 328 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‍ನಲ್ಲಿ ಇಂದು ಒಟ್ಟು 7,205 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 328 ಮಂದಿಯಲ್ಲಿ ಪಾಸಿಟಿವ್ ಇರುವುದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದಲ್ಲಿ 163 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದು 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 1,159 ಸಕ್ರೀಯ ಕೇಸ್‍ಗಳಿದ್ದು, 1,087 ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. 72 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 9 ಮಂದಿ ಐಸಿಯುನಲ್ಲಿದ್ದರೆ, ಮೂವರು ಐಸಿಯು ಜೊತೆ ವೆಂಟಿಲೇಟರ್ ಸಪೋರ್ಟ್‍ನಲ್ಲಿದ್ದಾರೆ. ಇನ್ನು 51 ಮಂದಿ ಜನರಲ್ ಬೆಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಅತಿ ಹೆಚ್ಚು ಸಕ್ರೀಯ ಪ್ರಕರಣ ದಾಖಲಾಗಿವೆ. ಮೈಸೂರು 26, ಬೆಂಗಳೂರು ಗ್ರಾಮೀಣ 18, ತುಮಕೂರು 15, ಹಾಸನ 12 ಹಾಗೂ ಚಿಕ್ಕಬಳ್ಳಾಪುರದಲ್ಲಿ 10 ಸಕ್ರೀಯ ಪ್ರಕರಣಗಳಿವೆ.