ಜನಮನ

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 60 ಕಡೆಗಳಲ್ಲಿ ದಿಢೀರ್ ಲೋಕಾಯುಕ್ತ ದಾಳಿ 

Views: 115

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ. ವಿವಿಧೆಡೆ  ದಿಢೀರ್ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಮಂಡ್ಯ: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಲೆಕ್ಕಸಹಾಯಕನ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಅಗಸನಪುರ ಗ್ರಾಮ ಪಂಚಾಯತಿ ಲೆಕ್ಕಸಹಾಯಕ ಕೃಷ್ಣೇಗೌಡ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಕೊಡಗು: ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಸೋಮವಾರಪೇಟೆ ಇಓ ಜಯಣ್ಣ ಹಾಗೂ ಅಸಿಟೆಂಟ್ ಇಂಜಿನಿಯರ್ ಫಯಾಜ್ ಅಹಮದ್ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಧಾರವಾಡ: ಅರಣ್ಯ ಇಲಾಖೆ ಅಧಿಕಾರಿ ಮಹೇಶ್ ಹಿರೇಮಠ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸ್ತಿದ್ದಾರೆ.

ಮೈಸೂರು: ಮೈಸೂರು ಲೊಕಾಯುಕ್ತ ಎಸ್.ಪಿ. ಸಜಿದ್ ಕುಮಾರ್ ನೇತೃತ್ವದಲ್ಲಿ 12 ಕಡೆ ದಾಳಿಯಾಗಿದೆ. ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಿಡಿಒ ಯತೀಶ್ ನಿವಾಸದ ಮೇಲೆ ದಾಳಿಯಾಗಿದೆ. ಪಿಡಿಒ ಯತೀಶ್ ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ. ಮೈಸೂರು, ಚನ್ನಪಟ್ಟಣದಲ್ಲಿ ಮನೆಗಳನ್ನ ಹೊಂದಿರು ಆರೋಪ ಇದೆ. ಬೆಸ್ಕಾಂ ಇಂಜಿನಿಯರ್ ಒಬ್ಬರ ನಿವಾಸದ ಮೇಲೂ ದಾಳಿಯಾಗಿದೆ ಎನ್ನಲಾಗಿದೆ.

ಬೀದರ್: ಏಕಕಾಲಕ್ಕೆ ನಾಲ್ಕು ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಅಧಿಕಾರಿಯ ನಿವಾಸಗಳು, ಕಚೇರಿ ಮೇಲೆ ದಾಳಿಯಾಗಿದೆ. ಕಾರಂಜಾ ಅಧಿಕಾರಿ ಶಿವಕುಮಾರ್ ಸ್ವಾಮಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿಯಾಗಿದೆ. ಲೋಕಾಯುಕ್ತ ಎಸ್‌ಪಿ ಆಂಟ್ಯೋನಿ ಜಾನ್ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‌ಪಿ ಎನ್‌ಎಮ್.ಓಲೇಕಾರ್ ನೇತೃತ್ವದಲ್ಲಿ ದಾಳಿಯಾಗಿದೆ.

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಫುರ ಕೆ.ಆರ್.ಡಿ.ಎಲ್ ನ ಇ.ಇ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಎಕ್ಸಿಕ್ಯೂಟೀವ್ ಇಂಜಿನಿಯರ್ ಸದಾಶಿವಯ್ಯಗೆ ಸೇರಿದ ಆಸ್ತಿ-ಪಾಸ್ತಿ ಮೇಲೆ ದಾಳಿಯಾಗಿದೆ. ಬೆಂಗಳೂರಿನ ಬಿಬಿಎಂಪಿಯ ಚೀಫ್ ಇಂಜಿನಿಯರ್ ರಂಗನಾಥ್ ಮನೆ ಮೇಲೆ ದಾಳಿಯಾಗಿದೆ. ಸದಾಶಿವನಗರದ ಮನೆಗೆ 5 ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button