ಧಾರ್ಮಿಕ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವೇಳೆ  ಪೇಜಾವರ ಶ್ರೀಗಳು ಮುಖ ಮುಚ್ಚಿಕೊಂಡಿದ್ದೇಕೆ?..ಸ್ವಾಮೀಜಿ ಅಚ್ಚರಿ ಹೇಳಿಕೆ ಹೀಗೆ..!

Views: 143

500 ವರ್ಷಗಳ ಬಳಿಕ ಕೋಟ್ಯಾನುಕೋಟಿ ರಾಮಭಕ್ತರ ಆಸೆ ಕೊನೆಗೂ ಈಡೇರಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಎಲ್ಲರ ಗಮನ ಸೆಳೆದಿದ್ದಾರೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೇಳೆ ಗರ್ಭಗುಡಿಯಲ್ಲಿ ಐವರು ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​, ಉತ್ತರ ಪ್ರದೇಶದ ರಾಜ್ಯಪಾಲರು, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ರಾಮ ಭೂಮಿ ಟ್ರಸ್ಟ್​ನ ಅಧ್ಯಕ್ಷರು ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಗೆ ನೈವೇದ್ಯ ಸಮರ್ಪಣೆ ಮಾಡುತ್ತಿದ್ದಾಗ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಮ್ಮ ವಸ್ತ್ರದಿಂದ ಮುಖವನ್ನು ಮುಚ್ಚಿಕೊಂಡಿದ್ದರು. ಇದನ್ನು ನೋಡಿದ ಅನೇಕರಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಏಕೆ ಹೀಗೆ ಮುಖವನ್ನು ಮುಚ್ಚಿಕೊಂಡರು ಎಂಬ ಪ್ರಶ್ನೆ ಮೂಡಿತ್ತು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ದಕ್ಷಿಣ ಭಾರತದಲ್ಲಿ ಅಲ್ಲದೇ ಉತ್ತರ ಭಾರತದಲ್ಲಿಯೂ ಕೂಡ ಈ ಸಂಪ್ರದಾಯ ಇದೆ. ದೇವರಿಗೆ ನೈವೇದ್ಯ ಸಮರ್ಪಣೆ ಮಾಡುವಾಗ ನಾವು ಅದನ್ನು ನೋಡುತ್ತಾ ಇರಬಾದರು ಎಂದು ನಮಗೆ ಹಿರಿಯ ಗುರುಗಳು ಹೇಳಿಕೊಟ್ಟಿದ್ದಾರೆ. ಅದಕ್ಕಾಗಿ ನಾನು ಹಾಗೇ ನನ್ನ ಮುಖವನ್ನು ವಸ್ತ್ರದಿಂದ ಮುಚ್ಚಿಕೊಂಡಿದ್ದೇನೆ ಎಂದಿದ್ದಾರೆ.

Related Articles

Back to top button