ರಾಮೇಶ್ವರಂ ಕೆಫೆ ಸ್ಫೋಟ: ಚಹರೆ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಶಂಕಿತ ವಶಕ್ಕೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ!

Views: 106
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಶಂಕೆ ಮೇರೆಗೆ ವಿಚಾರಣೆಗೊಳಪಡಿಸಲಾಗಿದ್ದವರ ಪೈಕಿ ಓರ್ವ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಯಲಾಗಿದೆ.
ಬೆಳಗ್ಗೆ ಸುಮಾರು 11.40ರ ವೇಳೆಗ ಆರೋಪಿ ರಾಮೇಶ್ವರಂ ಕೆಫೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಟೋಪಿ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.
ಇಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ‘ಮಧ್ಯಾಹ್ನ 12ರ ಸುಮಾರಿಗೆ 30 ವರ್ಷದ ವ್ಯಕ್ತಿ ಬ್ಯಾಗ್ ತಂದಿಟ್ಟಿದ್ದ. ನಂತರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಸೇವಿಸಿ ಹೋಗಿದ್ದಾರೆ. ಟೈಮರ್ ಇಟ್ಟು ಮಧ್ಯಾಹ್ನ 12.55ಕ್ಕೆ ಕಡಿಮೆ ತೀವ್ರತೆ ಬಾಂಬ್ ಸ್ಫೋಟವಾಗಿದೆ. ಸ್ಫೋಟದಲ್ಲಿ ಗ್ರಾಹಕರು, ಸಿಬ್ಬಂದಿ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಜೀವಕ್ಕೆ ಅಪಾಯವಿಲ್ಲ. ಬ್ಯಾಗ್ ತಂದಿಟ್ಟಿದ್ದ ವ್ಯಕ್ತಿಯ ಚಹರೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸ್ ಇಲಾಖೆಯ ವಿವಿಧ ತಂಡಗಳು ತನಿಖೆ ನಡೆಸುತ್ತಿವೆ.
ಶಂಕಿತ 28-30 ವರ್ಷ ವಯಸ್ಸಿನವನಾಗಿದ್ದು, BMTC ಬಸ್‌ನಲ್ಲಿ ರಾಮೇಶ್ವರಂ ಕೆಫೆಗೆ ಬಂದು ಕೂಪನ್ ಖರೀದಿಸಿ, ರವಾ ಇಡ್ಲಿ ಆರ್ಡರ್ ಮಾಡಿ, ಬ್ಯಾಗ್ ಇಟ್ಟು ಹೊರಟುಹೋಗಿದ್ದಾನೆ. ಶೋಧ ಕಾರ್ಯಕ್ಕಾಗಿ 8 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆತನ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ.
ಸದ್ಯ ಬೆಂಗಳೂರಿನಲ್ಲಿರುವ ಟಾಪ್ ಕೆಫೆಗಳಲ್ಲಿ ಒಂದಾಗಿರುವ ರಾಮೇಶ್ವರಂ ಕೆಫೆಯನ್ನು ಟಾರ್ಗೆಟ್ ಮಾಡಿಯೇ ಈ ಕೃತ್ಯ ಎಸಗಲಾಯ್ತಾ ಎಂಬುದು ಸದ್ಯಕ್ಕಿರುವ ಅನುಮಾನ. ಏಕೆಂದರೆ 2021ರಲ್ಲಿ ಆರಂಭವಾದ ಈ ಕೆಫೆ. ಅತೀ ಕಮ್ಮಿ ಸಮಯದಲ್ಲಿ ಸಾಕಷ್ಟು ಗ್ರಾಹಕರ ನೆಚ್ಚಿನ ಕೆಫೆಯಾಗಿ ಮಾರ್ಪಟ್ಟಿತು. ಹೀಗಾಗಿ ಬೇಕೆಂದೇ ರಾಮೇಶ್ವರಂ ಕೆಫೆಯನ್ನು ಟಾರ್ಗೆಟ್ ಮಾಡಿರುವ ಸಾಧ್ಯತೆಗಳು ಕೂಡ ಇರಬಹುದು ಎನ್ನಲಾಗುತ್ತಿದೆ. ಏಕೆಂದರೆ ಬೆಂಗಳೂರಿನಲ್ಲಿ ಈ ಕೆಫೆ ಮಾತ್ರವಲ್ಲದೆ ಅದೆಷ್ಟೋ ಹೊಟೇಲ್ ಗಳು ತುಂಬಿ ತುಳುಕುತ್ತಿರುತ್ತವೆ. ಆದರೆ ರಾಮೇಶ್ವರಂ ಕೆಫೆಯನ್ನೇ ಯಾಕೆ ಟಾರ್ಗೆಟ್ ಮಾಡಲಾಯ್ತು? ಇದಕ್ಕೆ ಕಾರಣ ಹುಡುಕ ಹೊರಟಾಗ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಅತೀ ಕಮ್ಮಿ ಸಮಯದಲ್ಲಿ ಫೇಮಸ್ ಆಗಿದ್ದಕ್ಕೆ ವೈಯಕ್ತಿಕ ದ್ವೇಷ ಇರಬಹುದು. ಬೆಳೆದು ಬಿಟ್ಟರಲ್ಲಾ ಎಂಬ ಅಸೂಯೆ ಕೂಡ ಇರಬಹುದು. ವ್ಯವಹಾರಿಕ ಸ್ಪರ್ಧೆ ಕೂಡ ಕಾರಣವಾಗಿರಬಹುದು. ಗ್ರಾಹಕರನ್ನು ಕಳೆದುಕೊಂಡ ಇತರ ಹೊಟೇಲ್ ಗಳು ಟಾರ್ಗೆಟ್ ಮಾಡಿರಬಹುದು ಎಂಬ ಬಗೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಆರಂಭವಾಗಿದೆ.