ಸಾಮಾಜಿಕ
ರಿಜಿಸ್ಟರ್ ಮ್ಯಾರೇಜ್ ಗೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯಬೇಕಿಲ್ಲ! ಇನ್ಮುಂದೆ ಆನ್ ಲೈನ್ ಮೂಲಕ ನೊಂದಣಿ

Views: 53
ಬೆಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋಧನೆ ನೀಡಿದೆ.ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ಸೂಚಿಸಿದೆ.
ಸಚಿವ ಸಂಪುಟ ಸಭೆಯ ಬಳಿಕೆ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದೂ ವಿವಾಹ ನೊಂದಣಿ ಕಾಯ್ದೆ2024 ಕ್ಕೆ ಒಪ್ಪಿಗೆ ಕಚೇರಿಗಳಲ್ಲಿ ಮೊದಲು ವಿವಾಹ ಆಗುತ್ತಿದ್ದವು. ಈಗ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಾಮ ಒನ್,ಕಾವೇರಿ 2, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ಮೇಲೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದರು.