ಸಾಂಸ್ಕೃತಿಕ

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನದ ಕಾಂತಾರ ಪ್ರೀಕ್ವೆಲ್‌ ಪೋಸ್ಟರ್ ಬಿಡುಗಡೆ: ರಿಲೀಸ್ ಯಾವಾಗ?

Views: 69

ಕನ್ನಡ ಕರಾವಳಿ ಸುದ್ದಿ:’ಕಾಂತಾರ’ ಚಿತ್ರತಂಡ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ‘ಸಿನಿಮಾದ ಪ್ರೀಕ್ವೆಲ್‌ 2025ರ ಅಕ್ಟೋಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದೆ.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರ(ಕಾಂತಾರ ಚಾಪ್ಟರ್‌–1) ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರವನ್ನು ಹೊಂದಿದೆ. ಚಿತ್ರವು ಕನ್ನಡ, ತೆಲುಗು, ತಮಿಳು,ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಬಹುಭಾಗ ಕುಂದಾಪುರದಲ್ಲಿ ಚಿತ್ರೀಕರಣಗೊಂಡಿದ್ದು, ತಮ್ಮ ಪಾತ್ರಕ್ಕಾಗಿ ರಿಷಬ್‌ ಶೆಟ್ಟಿ ಅವರು ಕಳರಿಪಯಟ್ಟು ತರಬೇತಿ ಪಡೆದಿದ್ದಾರೆ. ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರು ಸಂಗೀತ ಸಂಯೋಜನೆ ನೀಡಿದ್ದಾರೆ. ಖ್ಯಾತ ಸಾಹಸ ನಿರ್ದೇಶಕ ಟೊಡರ್‌ ಲ್ಯಾಜರೋವ್‌ ಅವರು ಸಾಹಸ ದೃಶ್ಯಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

Related Articles

Back to top button