ಶಿಕ್ಷಣ

ಲಂಚಕ್ಕೆ ಬೇಡಿಕೆ ಇಟ್ಟ BEO ಲೋಕಾಯುಕ್ತ ಬಲೆಗೆ

Views: 84

ಕನ್ನಡ ಕರಾವಳಿ ಸುದ್ದಿ: ಶಿಕ್ಷಕರೊಬ್ಬರ ಅಮಾನತು ಆದೇಶ ಹಿಂಪಡೆಯಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಿಕ್ಷಕರೊಬ್ಬರು ನೀಡಿದ ದೂರು ಆಧರಿಸಿ ಶನಿವಾರ ಕಾರ್ಯಾಚರಣೆ ನಡೆಸಿದ್ದ ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರ ತಂಡ, ಬಿಇಒ ಮೌನೇಶ್ ಅವರನ್ನು ಬಲೆಗೆ ಬೀಳಿಸಿದೆ. ಮೌನೇಶ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ವಶಕ್ಕೆ ಪಡೆದುಕೊಳ್ಳಲಾಗಿದೆ.

ಇತ್ತೀಚೆಗೆ ಶಿಕ್ಷಕರೊಬ್ಬರ ಅಮಾನತು ಆಗಿತ್ತು. ಅಮಾನತು ಆದೇಶ ಹಿಂಪಡೆಯುವಂತೆ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಮೌನೇಶ್, 50 ಸಾವಿರ ರೂಪಾಯಿ ಕೊಟ್ಟರೆ ಆದೇಶ ಹಿಂಪಡೆಯುವುದಾಗಿ ಹೇಳಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ಹೇಳಿವೆ.

ದೂರುದಾರ ಶಿಕ್ಷಕನಿಂದ ಮುಂಗಡವಾಗಿ ರೂಪಾಯಿ15 ಸಾವಿರ ನೀಡಿದ್ದರು. ಮೌನೇಶ್ ಅವರನ್ನು ಹಣ ಪಡೆಯುತ್ತಿದ್ದಂತೆ ಮನೆಗೆ ಹೋಗಿ ವಶಕ್ಕೆ ಪಡೆಯಲಾಗಿದೆ.

Related Articles

Back to top button
error: Content is protected !!