ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಬಾರದ ಲೋಕಕ್ಕೆ

Views: 203
ಕನ್ನಡ ಕರಾವಳಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಲಂಡನ್ನಿಗೆ ಹೊರಟಿದ್ದ ಬೋಯಿಂಗ್ ಡ್ರೀಮ್ಲೈನರ್ ವಿಮಾನದಲ್ಲಿ 242 ಪ್ರಯಾಣಿಸುತ್ತಿದ್ದರು. ಅದರಲ್ಲಿ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾನೆ.
ಇನ್ನೂ, ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಹಿಂದಿನ ಕಣ್ಣೀರು ತರಿಸೋ ಕಥೆಗಳಿದ್ದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಗುರುವಾರ ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಬಾರದ ಲೋಕಕ್ಕೆ ಬೆಳೆಸಿದ್ದಾಳೆ.
ಹೌದು, ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೈಥಿಲಿ ಮೋರೆಶ್ವರ್ ಪಾಟೀಲ್ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಮಹಾರಾಷ್ಟ್ರ ರಾಯಗಢ ಜಿಲ್ಲೆಯ ಪನ್ವೆಲ್ ಮೂಲದ ಏರ್ ಇಂಡಿಯಾ ಗಗನಸಖಿ ಮೈಥಿಲಿ ಪಾಟೀಲ್ 24 ವರ್ಷಕ್ಕೆ ದುರಂತ ಅಂತ್ಯ ಕಂಡಿದ್ದಾರೆ.
ನಿನ್ನೆ ಬೆಳಗ್ಗೆ 11:30ರ ಹೊತ್ತಿಗೆ ಮೈಥಿಲಿ ಅಪ್ಪನೊಂದಿಗೆ ಕೊನೆಯದ್ದಾಗಿ ಮಾತನಾಡಿದ್ದಳು. ಲಂಡನ್‌ಗೆ ತಲುಪಿದ ಕೂಡಲೇ ಕರೆ ಮಾಡುವುದಾಗಿ ತಿಳಿಸಿದ್ದಳು. ಆದ್ರೆ ಅಹಮದಾಬಾದ್ ಏರ್‌ಪೋರ್ಟ್‌ನಿಂದ ಟೇಕಾಫ್ ಆದ ವಿಮಾನ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ಇದೇ ವಿಮಾನದಲ್ಲಿ ಗಗನ ಸಖಿಯಾಗಿದ್ದ ಮೈಥಿಲಿ ಬದುಕಿನ ದುರಂತ ಅಂತ್ಯ ಕಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಇಡೀ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.