ಇತರೆ
ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಾರಾಹಿ ಹಿನ್ನೀರಿಗೆ ಬಿದ್ದು ಚಾಲಕ ಪಾರು

Views: 105
ಕನ್ನಡ ಕರಾವಳಿ ಸುದ್ದಿ: ಹೊಸನಗರ ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಾರಾಹಿ ಹಿನ್ನೀರಿನ ನದಿಯ ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.