ಲೋಕಸಭೆ ಚುನಾವಣೆ-2024 ಬಿಜೆಪಿ-ಜೆಡಿಎಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿ!

Views: 137
ಬೆಂಗಳೂರು, :ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಲು ಕಮಲ-ದಳ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ಹೆಣೆದು ಶತಾಯಗತಾಯ ರಾಜ್ಯ 28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಬಿಜೆಪಿ ಹಾಗೂ ಜೆಡಿಎಸ್ ತಂತ್ರಗಾರಿಕೆ ನಡೆಸುತ್ತಿದೆ. ಬಹುತೇಕ ಕ್ಷೇತ್ರ ಹಂಚಿಕೆ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ
ಚುನಾವಣಾ ಚುನಾವಣಾ ತಯಾರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೈತ್ರಿ ಸೂತ್ರವನ್ನು ಹೆಣೆದಿದ್ದಾರೆ. ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ 24 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ನಾಲ್ಕು ಕ್ಷೇತ್ರಗಳು ಜೆಡಿಎಸ್‌ಗೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಪಕ್ಷವೂ ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಕೇಳಿದೆ. ಆದರೆ, ಬಿಜೆಪಿ ಹೈಕಮಾಂಡ್ ಆರು ಕ್ಷೇತ್ರಗಳ ಮೇಲಿನ ನಾಲ್ಕು ಕ್ಷೇತ್ರಗಳನ್ನು ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಹಾಗಾದರೆ ಬಿಜೆಪಿ ಮತ್ತು ಜೆಡಿಎಸ್ ನ ಸಂಭವನೀಯ ಅಭ್ಯರ್ಥಿಗಳು ಯಾರು? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಬಿಜೆಪಿ-ಜೆಡಿಎಸ್ ಸಂಭವನೀಯ ಅಭ್ಯರ್ಥಿ ಪಟ್ಟಿ
ಬೆಂಗಳೂರು ಕೇಂದ್ರ: ಪಿ ಸಿ ಮೋಹನ್
ತುಮಕೂರು: ವಿ ಸೋಮಣ್ಣ ಅಥವಾ, ಮಾಧುಸ್ವಾಮಿ
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ
ಮೈಸೂರು: ಪ್ರತಾಪ್ ಸಿಂಹ
ಚಾಮರಾಜನಗರ: ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್, ಕೊಳ್ಳಗಾಲ ಎನ್ ಮಹೇಶ್
ಚಿಕ್ಕಮಗಳೂರು: ಸಿ ಟಿ ರವಿ
ದಾವಣಗೆರೆ: ಜಿ ಎಂ ಸಿದ್ದೇಶ್ವರ್
ಶಿವಮೊಗ್ಗ: ಬಿ ವೈ ರಾಘವೇಂದ್ರ
ಹಾವೇರಿ: ಬಿ ಸಿ ಪಾಟೀಲ್, ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್
ಚಿಕ್ಕಬಳ್ಳಾಪುರ: ಡಾ. ಕೆ ಸುಧಾಕರ್ ಅಥವಾ ಅಲೋಕ್ ವಿಶ್ವನಾಥ್
ಉತ್ತರ ಕನ್ನಡ: ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿ
ದಕ್ಷಿಣ ಕನ್ನಡ: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ-ಧಾರವಾಡ: ಪ್ರಹ್ಲಾದ್ ಜೋಶಿ
ಚಿತ್ರದುರ್ಗ: ಎ ನಾರಾಯಣಸ್ವಾಮಿ
ಬಾಗಲಕೋಟೆ: ಪಿ. ಸಿ. ಗದ್ದಿಗೌಡರ್
ಬಳ್ಳಾರಿ: ಶ್ರೀರಾಮುಲು
ಕೊಪ್ಪಳ: ಕರಡಿ ಸಂಗಣ್ಣ
ವಿಜಯಪುರ: ರಮೇಶ್ ಜಿಗಜಿಣಗಿ
ಕಲಬುರ್ಗಿ: ಉಮೇಶ್ ಜಾದವ್
ಕೋಲಾರ: ಮುನಿಸ್ವಾಮಿ
ಬೆಳಗಾವಿ: ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್
ಬೀದರ್ : ಭಗವಂತ ಖೂಬಾ
ಚಿಕ್ಕೋಡಿ: ಅಣ್ಣಾಸಾಹೇಬ ಜೊಲ್ಲೆ ಅಥವಾ ರಮೇಶ್ ಕತ್ತಿ
ರಾಯಚೂರು : ರಾಜಾ ಅಮರೇಶ್ವರ
ಜೆಡಿಎಸ್ ಲೋಕಸಭಾ ಕ್ಷೇತ್ರ ಅಭ್ಯರ್ಥಿಗಳು
ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್
ಮಂಡ್ಯ: ಹೆಚ್ ಡಿ ಕುಮಾರಸ್ವಾಮಿ
ಹಾಸನ: ಪ್ರಜ್ವಲ್ ರೇವಣ್ಣ