ಇತರೆ
ವಕೀಲೆ ಅನುಮಾನಾಸ್ಪದ ಸಾವು, ಸಾವಿನ ಸುತ್ತಾ ಹಲವು ಅನುಮಾನಗಳು..!

Views: 182
ರಾಮನಗರ: ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಸುಕಿ (25) ಮೃತ ದುರ್ದೈವಿ.
ವಾಸುಕಿ ಅವರು ಅವಿವಾಹಿತೆಯಾಗಿದ್ದು,ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ವಕೀಲೆ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಕೀಲೆ ವಾಸುಕಿ ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅವಿವಾಹಿತೆಯಾಗಿರೋ ವಕೀಲೆ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.