ಶಿಕ್ಷಣ

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪುಷ್ಪವಾಟಿಕಾ ದಿನ

Views: 180

ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪುಷ್ಪ ವಾಟಿಕಾದ ವಿದ್ಯಾರ್ಥಿಗಳ ಮೊದಲ ದಿನವನ್ನು ಜೂನ್ 9 ರಂದು ಸಂಭ್ರಮದಿಂದ ಆಚರಿಸಲಾಯಿತು.

ನರ್ಸರಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿ ಆಟ ಪಾಠಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ಪೂರಕವಾಗಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳನ್ನು ಆಕರ್ಷಕವಾದ ತೋರಣದ ಮೂಲಕ ಸ್ವಾಗತಿಸಿ ಆರತಿ ಎತ್ತಿ ಪುಷ್ಪ ಸಿಂಚನದೊಂದಿಗೆ ಬರಮಾಡಿಕೊಳ್ಳಲಾಗಿದೆ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. 

ಈ ಸಂದರ್ಭದಲ್ಲಿ ಬಾಂಡ್ಯ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಗುರುಕುಲ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಡಾ.ರೂಪಾ ಶೆಣೈ ಅವರು ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Related Articles

Back to top button