ವರದಕ್ಷಿಣೆ ಕಿರುಕುಳದಿಂದ ಪತ್ನಿಯ ಕೊಲೆಯಲ್ಲಿ ಅಂತ್ಯ

Views: 64
ಕೋಲಾರ: ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರದ ಕೆಜಿಎಫ್‍ನ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಪವಿತ್ರ (36) ಎಂದು ಗುರುತಿಸಲಾಗಿದೆ.
ಪತಿ ಲೋಕೇಶ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಪವಿತ್ರ ಅವರು ಬುಧವಾರದಂದು ಸಂಜೆ ವೇಳೆ ಗಾರ್ಮೆಂಟ್ಸ್ ಕೆಲಸ ಮುಗಿಸಿಕೊಂಡು ಬರುತ್ತಿರುವ ವೇಳೆ ಆರೋಪಿ ಪತಿ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಸುನೀಗಿದ್ದಾಳೆ. ಕೊಲೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಲೊಕೇಶ್ ಹಾಗೂ ಪವಿತ್ರ ನಡುವಿನ ಗಲಾಟೆ ಶುರುವಾಗಿ ಇಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವರದಕ್ಷಿಣೆ ಕಿರುಕುಳದ ಪ್ರಕರಣ ಸಹ ದಾಖಲಾಗಿತ್ತು. ಇದೇ ಗಲಾಟೆ ಇದೀಗ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಊರಿಗಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್‍ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.