ಇತರೆ

ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Views: 184

ಕನ್ನಡ ಕರಾವಳಿ ಸುದ್ದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.

14 ವರ್ಷದ ಶಮಿತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ವಸತಿ ಶಾಲೆಯ ಶೌಚಾಲಯದಲ್ಲಿಯೇ ಶಮಿತಾ ಸಾವಿಗೆ ಶರಣಾಗಿದ್ದಾಳೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿಧ್ಯಾರ್ಥಿನಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೊಪ್ಪ ತಾಲೂಕಿನ ಬೊಮ್ಲಾಪುರ ಬಳಿಯ ಹೊಕ್ಕಳಿಕೆ ನಿವಾಸಿಯಾಗಿದ್ದ ಶಮಿತಾಳ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಕೊಪ್ಪ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button