ಜನಮನ
ವಾಯುಭಾರ ಕುಸಿತ: ಉಡುಪಿ,ಮಂಗಳೂರು ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ

Views: 235
ಕನ್ನಡ ಕರಾವಳಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಉಡುಪಿ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.






