ವಾಯುಭಾರ ಕುಸಿತ; ಉಡುಪಿ, ಮಂಗಳೂರು, ಉತ್ತಮ ಮಳೆ, ಎಲ್ಲೋ ಅಲರ್ಟ್ ಘೋಷಣೆ

Views: 234
ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿಯ ಉಡುಪಿ, ಮಂಗಳೂರು ಬುಧವಾರದಿಂದ ಆರಂಭಗೊಂಡ ಗುರುವಾರವು ಮುಂದುವರಿದಿದೆ.
ಮಧ್ಯರಾತ್ರಿ ಮತ್ತು ಬೆಳಗ್ಗಿನ ಜಾವದಿಂದ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳಿಕ ದಿನವಿಡೀ ಹಗಲಿನಲ್ಲಿ ಮೋಡದಿಂದ ಕೂಡಿದ ವಾತಾವರಣ ಇತ್ತು.ಸಮುದ್ರ ಮಟ್ಟದಲ್ಲಿ ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಅರಬಿ ಸಮುದ್ರದ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಗೆ ಕಾರಣವಾಗಿದೆ.
ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕುಂದಾಪುರ ತಾಲೂಕಿನಾದ್ಯಂತ ಮಳೆಯಾಗಿದೆ. ಉಳಿದಂತೆ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಮಳೆಯ ಪರಿಣಾಮ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ಕೈಕೊಟ್ಟಿತ್ತು.ಹಲವೆಡೆ ಗುಡುಗು ಸಹಿತ ಉತ್ತಮ ಮಳೆ ದಕ್ಷಿಣಕನ್ನಡ ಹಲವೆಡೆ ಗುಡುಗು ಸಹಿತ ಉತ್ತಮಮಳೆ ವಾಡಿಕೆಯಂತೆ ಹಿಂಗಾರು ಮಳೆಯಿಂದಾಗಿ ಗ್ರಾಮೀಣ ಭಾಗದ ಒಣಗಿಸಿದ ಅಡಿಕೆ, ಕೆಲವೊಂದು ಉಪ ಬೆಳೆಗಳಿಗೆ ತೊಂದರೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮುಂದಿನ ಮೂರ್‍ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್’ ಘೋಷಣೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಜ. 4ರಂದು “ಎಲ್ಲೋ ಅಲರ್ಟ್’ ಘೊಷಿಸಲಾಗಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಇದರಿಂದಾಗಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆಯವರು ತಿಳಿಸಿದ್ದಾರೆ.