ಕರಾವಳಿ
ವಾಸ್ಕೋ-ವೆಲಂಕಣಿ ರೈಲು ಉಡುಪಿ, ಕುಂದಾಪುರದಲ್ಲಿ ನಿಲುಗಡೆ

Views: 166
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಕಳೆದ ಜನವರಿಯಿಂದ ವಾಸ್ಕೋ – ವೆಲಂಕಣಿ ಮಧ್ಯೆ ವಾರಕ್ಕೊಂದು ಬಾರಿ ಸಂಚರಿಸುತ್ತಿರುವ ವಿಶೇಷ ರೈಲಿಗೆ ಈಗ ಉಡುಪಿ ಹಾಗೂ ಕುಂದಾಪುರದ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ ಹಾಗೂ ಕುಂದಾಪುರದಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಈಗ ರೈಲ್ವೆ ಇಲಾಖೆ ಅನುಮತಿ ನೀಡಿದೆ.
ಈ ರೈಲು ಹುಬ್ಬಳ್ಳಿ ರೈಲ್ವೆ ಮಾರ್ಗದಲ್ಲಿ ಈ ಹಿಂದೆ ಸಂಚರಿಸುತ್ತಿದ್ದು, ಅಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಕಳೆದ ಜನವರಿಯಿಂದ ಎಪ್ರಿಲ್ ವರೆಗೆ ಈ ಮಾರ್ಗದಲ್ಲಿ ಸಂಚರಿಸುತ್ತಿದೆ. ಈ ಮಾರ್ಗದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾದರೆ ಪ್ರತ್ಯೇಕ ರೈಲಿಗೂ ಬೇಡಿಕೆಗೆ ಪ್ರಯತ್ನಿಸಲಾಗುವುದು ಎಂದು ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ತಿಳಿಸಿದ್ದಾರೆ.