ವಿಜಯೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ಫೇಲ್: ಡಿ.ವಿ.ಸದಾನಂದ ಗೌಡ

Views: 88
ಕನ್ನಡ ಕರಾವಳಿ ಸುದ್ದಿ : ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ, ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಸಮಾಧಾನ ಹೊರಹಾಕಿರುವ ಬೆನ್ನಲ್ಲೇ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರೂ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಅವರು ಪಕ್ಷದಲ್ಲಿನ ಅತೃಪ್ತ ನಾಯಕರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ತಿಳಿಸಿದರು.
ಇನ್ನು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಮಾತನಾಡಿದ ಅವರು, ಸಹಮತ ಇರದಿದ್ದರೆ ಪಕ್ಷದಲ್ಲಿ ಚುನಾವಣೆ ನಡೆಯುತ್ತದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆ ಬೇಡ ಅಂದರೆ ಅವಿರೋಧ ಆಯ್ಕೆ ಆಗುತ್ತದೆ ಎಂದು ಹೇಳಿದ್ದು, ಚುನಾವಣೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಪರೋಕ್ಷವಾಗಿ ಅಭಿಪ್ರಾಯಪಟ್ಟರು.
ನಮ್ಮ ಪಕ್ಷ ಶಿಸ್ತಿನ ಪಾರ್ಟಿ ಎನ್ನುತ್ತಾರೆ. ಆದರೆ ಯಾವ ಕ್ರಮಗಳು ಆಗುತ್ತಿಲ್ಲ. ಅತ್ತ ವಿಜಯೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ಫೇಲ್ ಆಗಿದ್ದಾರೆ. ಪಕ್ಷ ಸಂಘಟನೆಗೆ ಪೆಟ್ಟಾಗಿದೆ. ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಾಗಲೇ ಇದರ ಬಗ್ಗೆ ಗಮನಹರಿಸಿ ಸರಿ ಮಾಡಬೇಕಾಗಿತ್ತು, ಆದರೆ ಅದು ಆಗಲಿಲ್ಲ ಎಂದರು.