ಇತರೆ
ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

Views: 138
ಕನ್ನಡ ಕರಾವಳಿ ಸುದ್ಧಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ಕಾರಣದಿಂದ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿಂತ 48 ಗಂಟೆಗಳ ಮುಂಚಿತವಾಗಿ ಅ. 19 ರ ಸಂಜೆ 4 ಗಂಟೆಯಿಂದ ಅ. 21 ರ ಸಂಜೆ 4 ಗಂಟೆಯ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.
ಈ ಸಮಯದಲ್ಲಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಹೋಟೇಲುಗಳಲ್ಲಿ, ಕಬ್ ಗಳಲ್ಲಿ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ/ಸರಬರಾಜು ಮಾಡುವುದನ್ನು ಕೂಡಾ ನಿಷೇಧಿಸಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.