ರಾಜಕೀಯ
ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಕಪ್ಪು ಚುಕ್ಕೆ :ಕಾಂಗ್ರೆಸ್ ವಾಗ್ದಾಳಿ

Views: 0
ವಿಧಾನ ಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಸರಕಾರ ರಚನೆ ಆಯ್ತು. ನಾವು ಸಕ್ರೀಯವಾಗಿ ಹಲವು ದಿನಗಳಾಯಿತು. .ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಜಾರಿಯೂ ಆಯ್ತು.. ನಮ್ಮ ಗ್ಯಾರಂಟಿಗಳ ಬಗ್ಗೆ ಮಾತನಾಡುವುದಕ್ಕೆ ನಿಮ್ಮ ವಿರೋಧ ಪಕ್ಷ ನಾಯಕ ಎಲ್ಲಿ? ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ..
ಬಿಜೆಪಿ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ಅರ್ಹತೆ ಇರುವ ಒಬ್ಬರೇ ಒಬ್ಬ ಶಾಸಕ ನಿಲ್ಲದಿರುವುದು ಅತ್ಯಂತ ನಾಚಿಕೆಗೇಡು ಎಂದು. ಸರ್ಕಾರದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕರಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ.. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಿಲ್ಲ. ವಿಪಕ್ಷ ದಲ್ಲಿರುವಾಗಲೂ ಗೌರವಿಸಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.