ರಾಜಕೀಯ
ವಿರೋಧ ಪಕ್ಷದ ನಾಯಕನಿಲ್ಲದ ಅಧಿವೇಶನ: :ಪ್ರತಿಪಕ್ಷದ ನಾಯಕನೆಲ್ಲಿ? ಕಾಂಗ್ರೆಸ್ ಪ್ರಶ್ನೆ

Views: 0
ಚುನಾವಣಾ ಫಲಿತಾಂಶ ಬಂದು ಎರಡು ತಿಂಗಳಾಯಿತು. ಅಧಿವೇಶನವೂ ಆರಂಭವಾಯಿತು. ಆದರೆ, ಬಿಜೆಪಿಯ ವಿರೋಧ ಪಕ್ಷದ ನಾಯಕ ಎಲ್ಲಿ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪನವರು ಸಚಿವ ಸಂಪುಟ ರಚನೆಗೆ ತಿಂಗಳು ಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು. ನಂತರ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿಯ ದಂಡೆಯಾತ್ರೆ ಮಾಡಿದರು. ಆದರೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ ಈಗ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.
ಕರ್ನಾಟಕದ ವಿಧಾನಸಭೆಯಲ್ಲಿ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಗೆ ಇವತ್ತಿಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮಾಡುತ್ತಿರುವ ವ್ಯಂಗ್ಯಗಳಿಗೆ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡಿದೆ.