ಆರೋಗ್ಯ
ವ್ಯಾಕ್ಸಿನೇಷನ್ ನೀಡಿದ ಬಳಿಕ ಮಗು ಸಾವು:ವೈದ್ಯರೇ ಕಾರಣ ಪೋಷಕರ ಆರೋಪ

Views: 28
ರಾಮನಗರ: ಇಂಜೆಕ್ಷನ್ ಹಾಕಿಸಿದ್ದಕ್ಕೆ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಒಂದೂವರೆ ತಿಂಗಳ ಗಂಡು ಮಗು ಸಾವನ್ನಪ್ಪಿದೆ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಇಂಜೆಕ್ಷನ್ ನೀಡಲಾಗಿತ್ತು. ವ್ಯಾಕ್ಸಿನೇಷನ್ ನೀಡಿ ಒಂದು ಗಂಟೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಮಗು ಸಾವನ್ನಪ್ಪಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪೋಷಕರು ವ್ಯಾಕ್ಸಿನೇಷನ್ ಹಾಕಿಸಿದ್ದಕ್ಕೆ ಮಗು ಸಾವನಪ್ಪಿದೆ ಎಂದು ಆರೋಪಿಸಿದ್ದಾರೆ. ಮಗು ಸಾವಿಗೆ ವೈದ್ಯರೇ ಕಾರಣ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.