ಶಿಕ್ಷಣ

ಶಾಲೆಗೆ ಹೊರಡಲು ಸಿದ್ಧತೆಯಲ್ಲಿರುವಾಗಲೇ ಶಿಕ್ಷಕಿ ಕುಸಿದು ಬಿದ್ದು ಸಾವು 

Views: 170

ಕನ್ನಡ ಕರಾವಳಿ ಸುದ್ದಿ: ಶಾಲೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗಲೇ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಕ್ತನಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ (49) ಮೃತ ಶಿಕ್ಷಕಿ. ಇಂದು ಬೆಳಿಗ್ಗೆ ಸುಲೋಚನಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.

ಕುಸಿದು ಬಿದ್ದವರೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಲೋಚನಾ, ನೆಲಮಂಗಲದ ಬಸವಣ್ಣ ದೇವರ ಮಠದ ಶಾಲೆಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Related Articles

Back to top button