ಜನಮನ

ಶಿರಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಫಾಲ್ಸ್‌ಗೆ ಉರುಳಿ ಬಿದ್ದ ಕಾರು

Views: 186

ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ.

Related Articles

Back to top button