ಇತರೆ
ಶಿರಾಡಿಯಲ್ಲಿ ಕಾರು-ಲಾರಿ ನಡುವೆ ಅಪಘಾತ: ಕಾರಿನಲ್ಲಿದ್ದ ವ್ಯಕ್ತಿ ಸಾವು

Views: 89
ಕನ್ನಡ ಕರಾವಳಿ ಸುದ್ದಿ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ(72) ಮೃತಪಟ್ಟವರು.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು (ಕೆಎ 53, ಎಂಎಚ್ 2048) ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ(ಕೆಎ 41, 4310) ನಡುವೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ.
ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು, ಮೊಮ್ಮಗ ಅನ್ನು ಅವರು ಸಣ್ಣಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರು ಅವರು ಮಂಗಳೂರಿನಲ್ಲಿ ವಿಮಾ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಗಳ ಮಗನನ್ನು ನೋಡಲೆಂದು ಬರುತ್ತಿದ್ದರು.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.