ಕರಾವಳಿ

ಶಿರ್ವ:ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ: ಗಂಭೀರ ಗಾಯ

Views: 87

ಉಡುಪಿ: ಮನೆಯ ಜಗುಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿರ್ವ ಗ್ರಾಮಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ  ಸಂಭವಿಸಿದೆ.

ಗಾಯಗೊಂಡವರನ್ನು ಬಿಹಾರ ಮೂಲದ ಕಾರ್ಮಿಕ ಸುರೇಂದ್ರ(55) ಎಂದು ಗುರುತಿಸಲಾಗಿದೆ.

ಮರಳುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಇವರು, ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ಜಗಲಿಯಲ್ಲಿ ರಾತ್ರಿ ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.

ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನು ಇಡುವ ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

Related Articles

Back to top button