ಇತರೆ
ಶಿವಮೊಗ್ಗ; ಒಂದೇ ಮನೆಯ ಮೂವರು ಸಜೀವ ದಹನ

Views: 0
ಒಂದೇ ಮನೆಯ ಮೂವರು ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿ ಶನಿವಾರ ರಾತ್ರಿ ನಡೆದಿದೆ.
ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ತೆರಳಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.