ಇತರೆ
ಶಿವಮೊಗ್ಗ :MBBS ವಿದ್ಯಾರ್ಥಿ ಆತ್ಮಹತ್ಯೆ

Views: 168
ಶಿವಮೊಗ್ಗ: MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಮಳವಳ್ಳಿಯ ಪ್ರಜ್ವಲ್
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ MBBS ಓದುತ್ತಿದ್ದ. ಮೂಲತಃ ಮಳವಳ್ಳಿಯ ನಿವಾಸಿಯಾಗಿರುವ ಈ ವಿದ್ಯಾರ್ಥಿ ಮೂರು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆಗೆ ಫಲಿಸದೇ ತಡರಾತ್ರಿ ವಿದ್ಯಾರ್ಥಿ ಪ್ರಜ್ವಲ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ