ಶೀತ ಗಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 24 ಗಂಟೆಗಳಲ್ಲಿ ದೇಶದಲ್ಲಿ 514ಮಂದಿಗೆ ಕೊರೊನಾ ಸೋಂಕು, ಆತಂಕ !

Views: 15
ನವದೆಹಲಿ,- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು ಆತಂಕ ಮೂಡಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 514 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕರ್ನಾಟಕ ಮತ್ತು ಕೇರಳದಲ್ಲಿ ತಲಾ ಇಬ್ಬರು ಸೇರಿದಂತೆ ಕೋವಿಡ್ ಸೋಂಕಿನಿಂದ ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶಗಳು ಮಾಹಿತಿ ನೀಡಿವೆ
ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,422 ಮಂದಿಯಲ್ಲಿ ಇದೆ. ಈ ಸಂಖ್ಯೆ, ಕೇರಳ, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ,ದೆಹಲಿ ಸೇರಿದಂತೆ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮಹಾರಾಷ್ಟ್ರ ಒಂದರಲ್ಲಿಯೇ ಕಳೆದ 24ಗಂಟೆಗಳಲ್ಲಿ 98ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಉಪ ತಳಿಯ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.
ದೇಶದಲ್ಲಿ ಕಳೆದ ಹಲವು ತಿಂಗಳಿನಿಂದ ಕೊರೊನಾ ಸೋಂಕು ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದ್ದು ಡಿಸೆಂಬರ್ ತಿಂಗಳಲ್ಲಿ ಸೋಂಕು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿತ್ತು ಮತ್ತೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಶೀತಗಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕು ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚು ಜಾಗೃತೆ ವಹಿಸಬೇಕು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ ಡಿಸೆಂಬರ್ ತಿಂಗಳು ಒಂದರಲ್ಲಿ ಜಾಗತಿಕವಾಗಿ ಕೋವಿಡ್ ಸೋಂಕಿನಿಂದ 10 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಸೋಂಕು ಸಂಖ್ಯೆ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.