ಶೋಭಾ ಆಯ್ತು, ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೈ ಕಾರ್ಯಕರ್ತರ ”ಗೋ ಬ್ಯಾಕ್ ಹೆಗ್ಡೆ”

Views: 185
ಚಿಕ್ಕಮಗಳೂರು: ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಅಭಿಯಾನ ಕೇಳಿಬಂದಿತ್ತು. ಇದೀಗ ಕಾಂಗ್ರೆಸ್ನಲ್ಲೂ ಅಂತಹದೇ ಅಭಿಯಾನ ಶುರುವಾಗಿದೆ. ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೋ ಬ್ಯಾಕ್ ಅಭಿಯಾನ ಕೇಳಿಬಂದಿದೆ.
ಕಾಂಗ್ರೆಸ್ ಕಾರ್ಯಕರ್ತರು ಸೇರಿ ಇದೀಗ ಗೋ ಬ್ಯಾಕ್ ಜಯಪ್ರಕಾಶ್ ಹೆಗ್ಡೆ ಅಭಿಯಾನ ಆರಂಭಿಸಿದ್ದಾರೆ. ಕಷ್ಟ ಕಾಲದಲ್ಲಿ ಪಕ್ಷಕ್ಕೆ ಕೈ ಕೊಟ್ಟವರು ಈಗ ಬೇಡ ಎಂದು ಪ್ರತಿಭಟಿಸಿದ್ದಾರೆ. ಮಾತ್ರವಲ್ಲದೆ ಸಿಎಂ ಸಿದ್ದರಾಮಯ್ಯ ಬಳಿಯೂ ಈ ಸಂಗತಿ ಹೇಳುವ ಮೂಲಕ ಒತ್ತಾಯಿಸಿದ್ದಾರೆ.
ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡಿ ಎಂದು ಎಂದು ಹೇಳುವ ಮೂಲಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಹೆಗ್ಡೆ ಅಭಿಯಾನ ಆರಂಭಿಸಿದ್ದಾರೆ.
ಲೋಕಸಭಾ ಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಯಪ್ರಕಾಶ್ ಹೆಗ್ಡೆ ಹೆಸರು ಕೇಳಿಬಂದಿತ್ತು. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂಬ ಮಾತುಗಳು ಕೇಳಿಬಂದಿತ್ತು. ಹೀಗಾಗಿ ಕೈ ಕಾರ್ಯಕರ್ತರಿಂದ ಅಭಿಯಾನದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಟಿಕೆಟ್ ನೀಡದ ಕುರಿತಾಗಿ ಚಿಕ್ಕಮಗಳೂರು, ಶೃಂಗೇರಿ ಕೊಪ್ಪ ಕಾರ್ಯಕರ್ತರಿಂದ ಸಿಎಂ ಸಿದ್ಧರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹೆಗ್ಡೆ ಬದಲಾಗಿ ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ಜಯಪ್ರಕಾಶ್ ಹೆಗ್ಡೆ 2012ರ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2017 ರ ಮಾರ್ಚ್ ನಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಸದ್ಯ ಮುಂಬರುವ ಲೋಕಸಬಾ ಚುನಾವಣೆಗೆ ಬಿಜೆಪಿ ಚಿಕ್ಕಮಗಳೂರು ಮತ್ತು ಉಡುಪಿಯಲ್ಲಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡುವ ವಿಚಾರವಾಗಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ನತ್ತ ಮುಖ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಕಾಂಗ್ರೆಸ್ ಕೂಡ ಸಮರ್ಥ ಗೆಲುವಿನ ಅಭ್ಯರ್ಥಿ ಹುಡುಕಾಟದಲ್ಲಿದೆ. ಹೀಗಾಗಿ ಎರಡು ಜಿಲ್ಲೆಗಳಲ್ಲೂ ಪರಿಚಯವಿರುವ ವ್ಯಕ್ತಿಗೆ ಟಿಕೆಟ್ ಫೈನಲ್ ಮಾಡಲು ಪ್ಲಾನ್ ಮಾಡಿಕೊಂಡಿದೆ. ಆದರೀಗ ಕಾಂಗ್ರೆಸ್ ಅಭ್ಯರ್ಥಿಗಳು ಹೆಗ್ಡೆ ಗೋ ಬ್ಯಾಕ್ ಎಂದು ಹೇಳುವ ಮೂಲಕ ಅಭಿಯಾನ ಶುರು ಮಾಡಿದ್ದಾರೆ.